ರಾಯಚೂರು:ಕಾಳಸಂತೆಗೆ ಸಾಗಣೆ ಮಾಡಲು ಸಂಗ್ರಹಿಸಿದ್ದ ಅಂದಾಜು ರೂ. 1.50 ಲಕ್ಷ ಮೌಲ್ಯದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಎಪಿಎಂಸಿ ಆವರಣದ ಶ್ರೀ ಶರಣಬಸವೇಶ್ವರ ಟ್ರೇಡಿಂಗ್ ಕಂಪನಿ ಅಂಗಡಿಯೊಂದರಲ್ಲಿ 135 ಚೀಲದಲ್ಲಿ 75 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿರುವುದು ಪರಿಶೀಲನೆ ವೇಳೆ ಬಹಿರಂಗಗೊಂಡಿದೆ.
ರಾಯಚೂರಿನ ಅಂಗಡಿಯೊಂದರಲ್ಲಿ ಪಡಿತರ ಅಕ್ಕಿ ದಾಸ್ತಾನು: 1.50 ಲಕ್ಷ ಮೌಲ್ಯದ ಅಕ್ಕಿ ಜಪ್ತಿ - ರಾಯಚೂರಿನಲ್ಲಿ 1.50 ಲಕ್ಷ ಮೌಲ್ಯದ ಪಡಿತರ ಅಕ್ಕಿ ಜಪ್ತಿ
ರಾಯಚೂರು ಜಿಲ್ಲೆಯ ಲಿಂಗಸುಗೂರು ಎಪಿಎಂಸಿ ಆವರಣದ ಶ್ರೀ ಶರಣಬಸವೇಶ್ವರ ಟ್ರೇಡಿಂಗ್ ಕಂಪನಿ ಅಂಗಡಿಯೊಂದರಲ್ಲಿ 135 ಚೀಲದಲ್ಲಿ 75 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿರುವುದು ಪರಿಶೀಲನೆ ವೇಳೆ ಬಹಿರಂಗಗೊಂಡಿದೆ.
ನ್ಯಾಯಬೆಲೆ ಅಂಗಡಿಗಳ ಮೂಲಕ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ನೀಡಲು ಸರ್ಕಾರ ಅಕ್ಕಿ ಪೂರೈಕೆ ಮಾಡಲಾಗುತ್ತದೆ. ಈ ಅಕ್ಕಿ ಸರ್ಕಾರ ಗೋದಾಮು ಇಲ್ಲವೇ ಸಂಬಂಧಿಸಿದ ನ್ಯಾಯ ಬೆಲೆ ಅಂಗಡಿಯಲ್ಲಿ ಇರಿಸಿ ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಬೇಕು. ಆದರೆ, ಅಕ್ರಮವಾಗಿ ಅಂಗಡಿಯಲ್ಲಿ ಸಂಗ್ರಹಿಸಿರುವ ಆಧಾರದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಚೀಲಗಳನ್ನು ಜಪ್ತಿ ಮಾಡಿದ್ದಾರೆ.
ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿರುವ ಕುರಿತಂತೆ ಶರಣಬಸವ ಕಸಬಾ ಲಿಂಗಸುಗೂರು ಎಂಬುವವರ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಆಹಾರ ನಿರೀಕ್ಷಕ ಅಬ್ದುಲ್ ರೌಫ್ ನೀಡಿದ ದೂರಿನ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಸಜ್ಜನ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.