ಕರ್ನಾಟಕ

karnataka

ETV Bharat / state

ರಾಯಚೂರು ಜಿಲ್ಲೆಯಲ್ಲಿಂದು 101 ಜನರಿಗೆ ಕೊರೊನಾ ಸೋಂಕು ದೃಢ

ಜಿಲ್ಲೆಯಲ್ಲಿ ಇಂದು ಎಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದೆ.ಎಷ್ಟು ಜನರು ಗುಣಮುಖರಾಗಿದ್ದಾರೆ ಎಂಬುದರ ಕುರಿತ ಮಾಹಿತಿ ಇಲ್ಲಿದೆ.

Raichur
Raichur

By

Published : Sep 30, 2020, 6:17 PM IST

ರಾಯಚೂರು : ಜಿಲ್ಲೆಯಲ್ಲಿ ಇಂದು 101 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 11,393ಕ್ಕೆ ತಲುಪಿದೆ.

ತಾಲೂಕುವಾರು ಕೋವಿಡ್ ವಿವರ :
ರಾಯಚೂರು ತಾಲೂಕಿನಲ್ಲಿ 38, ಮಾನವಿ 7, ಲಿಂಗಸೂಗೂರು 22, ಸಿಂಧನೂರು 19, ದೇವದುರ್ಗ 15 ಪ್ರಕರಣಗಳು ಇಂದು ಪತ್ತೆಯಾಗಿವೆ.

ಗುಣಮುಖ :

ಈವರಗೆ ಪತ್ತೆಯಾಗಿರುವ ಸೋಂಕಿತರಲ್ಲಿ 9,713 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 1,545 ಪ್ರಕರಣಗಳು ಸಕ್ರಿಯವಾಗಿವೆ.

ಮೃತರ ಮಾಹಿತಿ :

ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸೋಂಕಿನಿಂದ 135 ಜನ ಮೃತಪಟ್ಟಿದ್ದರೆ.

ಪತ್ತೆಯಾಗಿರುವ ರೋಗದ ಗುಣಲಕ್ಷಣದ ಆಧಾರದ ಮೇಲೆ ಸೋಂಕಿತರನ್ನು ಕ್ವಾರಂಟೈನ್ ಕೇಂದ್ರ, ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿ, ಸಂಪರ್ಕಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details