ರಾಯಚೂರು:2018-2019ನೇ ಸಾಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಹತ್ತನೇ ಘಟಿಕೋತ್ಸವ 2021ರ ಜ.9 ರಂದು ನಡೆಯಲಿದೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಎನ್. ಕಟ್ಟಿಮನಿ ತಿಳಿಸಿದ್ದಾರೆ.
ನಗರದ ಕೃಷಿ ವಿವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿ ಆವರಣದಲ್ಲಿನ ಪ್ರೇಕ್ಷಕ ಗೃಹದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಘಟಿಕೋತ್ಸವದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ಮುಖ್ಯ ಭಾಷಣಕಾರರಾಗಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಶಿಕ್ಷಣ ವಿಭಾಗದ ಉಪಮಹಾನಿರ್ದೇಶಕ ಡಾ. ಆರ್.ಸಿ. ಅಗರವಾಲ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.