ಕರ್ನಾಟಕ

karnataka

ETV Bharat / state

ರಾಯಚೂರು ಜಿಲ್ಲೆಯಲ್ಲಿ ಒಂದೇ ದಿನ 117 ಸೋಂಕಿತ ಕೇಸ್‌ಗಳು ಪತ್ತೆ - Corona virus update

ರಾಯಚೂರು ಜಿಲ್ಲೆಯಲ್ಲಿ ಇಂದು 117 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 931 ತಲುಪಿದೆ.

Raichur Medical Science Institute
ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ

By

Published : Jul 16, 2020, 7:44 PM IST

ರಾಯಚೂರು: ಜಿಲ್ಲೆಯಲ್ಲಿ ಇಂದು ಒಂದೇ ದಿನ 117 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆಯಾಗಿದೆ.

ರಾಯಚೂರು ತಾಲೂಕಿನಲ್ಲಿ 49, ಮಾನವಿ 36, ದೇವದುರ್ಗ 9, ಸಿಂಧನೂರು 15, ಲಿಂಗಸೂಗೂರು ತಾಲೂಕಿನಲ್ಲಿ 8 ಸೋಂಕಿತರು ಪತ್ತೆಯಾಗಿದ್ದು, ಐಸೊಲೇಷನ್ ವಾರ್ಡ್ ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಈವರೆಗೂ 30,268 ಜನರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 26,099 ವರದಿಗಳು ನೆಗೆಟಿವ್ ಆಗಿವೆ. ಉಳಿದ 3,232 ಸ್ಯಾಂಪಲ್​ಗಳ ಫಲಿತಾಂಶ ಬರುವುದು ಬಾಕಿಯಿದೆ.

ರಾಯಚೂರು ತಾಲೂಕಿನಲ್ಲಿ 78, ಸಿಂಧನೂರು 14, ಮಾನ್ವಿ 22 ಹಾಗೂ ಲಿಂಗಸೂಗೂರಿನ 21 ಸೇರಿ 135 ಜನರನ್ನು ಸಾಂಸ್ಥಿಕ ಕ್ವಾರಂಟೈನ್​​​ನಲ್ಲಿ ಇರಿಸಿ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ABOUT THE AUTHOR

...view details