ರಾಯಚೂರು: ಜಿಲ್ಲೆಯಲ್ಲಿ ಇಂದು ಒಂದೇ ದಿನ 135 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,138ಕ್ಕೆ ತಲುಪಿದೆ.
ಇಂದು ಬಂದಿರುವ ವರದಿಯಲ್ಲಿ ರಾಯಚೂರು ತಾಲೂಕಿನಲ್ಲಿ 100 ಜನ, ಮಾನವಿ 25, ಸಿಂಧನೂರು 5, ಲಿಂಗಸೂಗೂರು 4 ಹಾಗೂ ದೇವದುರ್ಗ ತಾಲೂಕಿನಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.
ರಾಯಚೂರಿನಲ್ಲಿ ಕೊರೊನಾ ಸ್ಫೋಟ ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 692 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನುಳಿದ 431 ಪ್ರಕರಣಗಳು ಸಕ್ರಿಯವಾಗಿದೆ. ಇಂದು ಇಬ್ಬರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾಗಿರುವ ಸೋಂಕಿತರ ಸಂಪರ್ಕದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.