ರಾಯಚೂರು:ಜಿಲ್ಲೆಯಲ್ಲಿಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 1407 ವಿದ್ಯಾರ್ಥಿಗಳು ಗೈರು ಆಗಿದ್ದಾರೆ.
ರಾಯಚೂರಿನಲ್ಲಿ ಪರೀಕ್ಷೆಗೆ 26,137 ವಿದ್ಯಾರ್ಥಿಗಳು ಹಾಜರು: ಗೈರಾದವರ ಸಂಖ್ಯೆ ಎಷ್ಟು ಗೊತ್ತಾ? - ರಾಯಚೂರು ಲೆಟೆಸ್ಟ್ ನ್ಯೂಸ್
ಇಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 26,137 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1407 ವಿದ್ಯಾರ್ಥಿಗಳು ಗೈರಾಗಿದ್ದಾರೆ.

Sslc exam
ರಾಜ್ಯಾದ್ಯಂತ ಇಂದು ದ್ವಿತೀಯ ಭಾಷೆ ಇಂಗ್ಲೀಷ್ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 27,544 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 26,137 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1407 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಇನ್ನೂ ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಪ್ರಕರಣಗಳು ವರದಿಯಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.