ರಾಯಚೂರು:ಇಂದು153 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5519ಕ್ಕೆ ತಲುಪಿದೆ.
ಈವರೆಗೆ ಜಿಲ್ಲೆಯಲ್ಲಿ ಪತ್ತೆಯಾಗಿರುವ ಸೋಂಕಿತರಲ್ಲಿ 3579 ಜನರು ಕೊರೊನಾದಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು,ಇನ್ನು ಜಿಲ್ಲೆಯಲ್ಲಿ 1874 ಸಕ್ರಿಯ ಪ್ರಕರಣಗಳಿವೆ.
ಇಂದು ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 66 ಏರಿಕೆಯಾಗಿದೆ.
ಇಂದು ಕೊರೊನಾ ಪತ್ತೆಯಾದ ಸೋಂಕಿತರನ್ನು ರೋಗದ ಗುಣದ ಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್, ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗುತ್ತಿದೆ. ಸೋಂಕಿತರನ್ನು ಸಂಪರ್ಕಗಳನ್ನು ಸಂಗ್ರಹಿಸುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.