ಕರ್ನಾಟಕ

karnataka

By

Published : Sep 3, 2020, 8:22 PM IST

ETV Bharat / state

ರಾಯಚೂರು ಜಿಲ್ಲೆಯಲ್ಲಿ 160 ಜನರಿಗೆ ಕೊರೊನಾ

ರಾಯಚೂರು ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Raichur
Raichur

ರಾಯಚೂರು:ಜಿಲ್ಲೆಯಲ್ಲಿ ಇಂದು ಹೊಸದಾಗಿ 160 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಇಂದು ರಾಯಚೂರು ತಾಲೂಕಿನಲ್ಲಿ 42, ದೇವದುರ್ಗ 21, ಲಿಂಗಸೂಗೂರು 18, ಸಿಂಧನೂರು 50 , ಮಾನವಿ 29 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7800 ಕ್ಕೆ ಏರಿಕೆಯಾಗಿವೆ.

ಮೃತರ ಮಾಹಿತಿ:ಇಂದು ಮೂವರು ಸೋಂಕಿತರು ಸಾವನ್ನಪ್ಪುವ ಮೂಲಕ ಮೃತರ ಸಂಖ್ಯೆ 97 ಕ್ಕೆ ಏರಿಕೆಯಾಗಿದೆ.

ಗುಣಮುಖ:

ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 6007 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1696 ಪ್ರಕರಣಗಳು ಸಕ್ರಿಯವಾಗಿವೆ.

ಪತ್ತೆಯಾಗಿರುವ ಸೋಂಕಿತರನ್ನು ರೋಗದ ಗುಣಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್, ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಸಂಪರ್ಕಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details