ರಾಯಚೂರು:ಜಿಲ್ಲೆಯಲ್ಲಿ ಇಂದು 18 ಕೊರೊನಾ ಶಂಕಿತ ಸೋಂಕಿತರು ಪತ್ತೆಯಾಗಿದ್ದಾರೆ.
ರಾಯಚೂರಿನಲ್ಲಿ ಇಂದು 18 ಕೊರೊನಾ ಶಂಕಿತರು ಪತ್ತೆ - Raichur News
ರಾಯಚೂರು ಜಿಲ್ಲೆಯಲ್ಲಿ ಈ ಹಿಂದೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ರಕ್ತ ಮತ್ತು ಗಂಟಲು ದ್ರವದ ಮಾದರಿಗಳು ನೆಗೆಟಿವ್ ಬಂದಿದ್ದು, ಇಂದು ಹೊಸದಾಗಿ 18 ಜನರ ರಕ್ತ ಹಾಗೂ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ.
ರಾಯಚೂರಿನಲ್ಲಿ ಇಂದು 18 ಕೊರೊನಾ ಶಂಕಿತರು ಪತ್ತೆ
ಜಿಲ್ಲೆಯಿಂದ ಈ ಹಿಂದೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ರಕ್ತ ಮತ್ತು ಗಂಟಲು ದ್ರವದ ಮಾದರಿಗಳು ನೆಗೆಟಿವ್ ಬಂದಿದ್ದು, ಇಂದು ಹೊಸದಾಗಿ 18 ಜನರ ರಕ್ತ ಹಾಗೂ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಜಿಲ್ಲೆಯಿಂದ ಇದುವರೆಗೂ ಒಟ್ಟು 83 ಜನರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 65 ಜನರ ವರದಿ ನೆಗೆಟಿವ್ ಬಂದಿದ್ದು, ಇನ್ನೂ 18 ಜನರ ವರದಿ ಬರುವುದು ಬಾಕಿಯಿದೆ.
ಒಟ್ಟು 109 ಜನರನ್ನ ಸರ್ಕಾರಿ ಕಟ್ಟಡದಲ್ಲಿ ದಿಗ್ಬಂಧನದಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.