ರಾಯಚೂರು:ಜಿಲ್ಲೆಯ ಇಂದು 181 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 4,526ಕ್ಕೆ ತಲುಪಿದೆ.
ರಾಯಚೂರು ತಾಲೂಕಿನಲ್ಲಿ 73, ಮಾನವಿ 33, ಲಿಂಗಸೂಗೂರು 35, ಸಿಂಧನೂರು 31, ದೇವದುರ್ಗ 9 ಪ್ರಕರಣಗಳು ಪತ್ತೆಯಾಗಿವೆ.

ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 2,836 ಮಂದಿ ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 1,641 ಪ್ರಕರಣಗಳು ಸಕ್ರಿಯವಾಗಿವೆ. ಇಂದು ಸಹ ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 49ಕ್ಕೆ ತಲುಪಿದೆ.
ಸೋಂಕಿತರನ್ನ ಕೋವಿಡ್ ಕೇರ್ ಆಸ್ಪತ್ರೆಗೆ ದಾಖಲಿಸಿ, ಅವರ ಸಂಪರ್ಕಗಳನ್ನ ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.