ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಕೋವಿಡ್ ಸೋಂಕಿತ ವೃದ್ಧನ ಮೊದಲ ಸಾವು ನಾಗರಿಕರಲ್ಲಿ ಆತಂಕ ಮೂಡಿಸಿದೆ.
ಲಿಂಗಸುಗೂರಿನಲ್ಲಿ ಕೊರೊನಾಗೆ ಮೊದಲ ಬಲಿ: ಆತಂಕದಲ್ಲಿ ಜನ - ಲಿಂಗಸುಗೂರಿನಲ್ಲಿ ಕೋವಿಡ್ಗೆ ಮೊದಲ ಬಲಿ
ನಿವೃತ್ತ ಕಂದಾಯ ನೌಕರ 72 ವರ್ಷದ ವೃದ್ಧ ಅನಾರೋಗ್ಯ ಕಾರಣ ಎರಡು ಖಾಸಗಿ ಆಸ್ಪತ್ರೆಗಳಿಗೆ ತೆರಳಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾದಾಗ ಕೋವಿಡ್ ಸೋಂಕು ದೃಢಪಟ್ಟಿದೆ. ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಮೃತಪಟ್ಟಿದ್ದಾನೆ.
ನಿವೃತ್ತ ಕಂದಾಯ ನೌಕರ 72 ವರ್ಷದ ವೃದ್ಧ ಅನಾರೋಗ್ಯ ಕಾರಣ ಎರಡು ಖಾಸಗಿ ಆಸ್ಪತ್ರೆಗಳಿಗೆ ತೆರಳಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾದಾಗ ಕೋವಿಡ್ ಸೋಂಕು ದೃಢಪಟ್ಟಿದೆ. ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಮೃತಪಟ್ಟಿದ್ದಾನೆ. ಪಟ್ಟಣದಲ್ಲಿ ಮೊದಲ ಸಾವಿನಿಂದ ಜನರಲ್ಲಿ ಭೀತಿ ಎದುರಾಗಿದೆ.
ಕೋವಿಡ್ ನಿಯಮಾನುಸಾರ ಮೃತರ ಸ್ವಂತ ಜಮೀನಿನಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಸಲಾಗಿದೆ. ಮೃತರ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿ, ಎರಡು ಖಾಸಗಿ ಆಸ್ಪತ್ರೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಇವರಿಗೆ ಕೋವಿಡ್ ಸೋಂಕು ಬಂದಿದ್ದಾದರು ಹೇಗೆ ಎಂಬುದು ಸವಾಲಾಗಿ ಪರಿಣಮಿಸಿದೆ.