ಕರ್ನಾಟಕ

karnataka

ETV Bharat / state

ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರು ಪಲ್ಟಿ: ಇಬ್ಬರ ಸಾವು

ರಸ್ತೆ ಅಪಘಾತವಾಗಿ ಇಬ್ಬರು ಮೃತಪಟ್ಟು, 8 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ.

car accident
ಕಾರು ಅಪಘಾತ

By

Published : Jun 22, 2020, 2:37 PM IST

Updated : Jun 22, 2020, 8:07 PM IST

ರಾಯಚೂರು:ರಸ್ತೆಗೆ ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮಣ್ಣಿಕೇರಿ ಗ್ರಾಮದ ಬಳಿ ಸಂಭವಿಸಿದೆ.

ಹುಬ್ಬಳ್ಳಿಯ ಮೆಹಜಾನ್ (35) ಸ್ಥಳದಲ್ಲೇ ಸಾವನ್ನಪ್ಪಿದರೆ, ಕಾರವಾರದ ಯಲ್ಲಪೂರನ ಅಬ್ದುಲ್ ಸುಭಾನ್(70) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ 8 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ರಾಯಚೂರಿನಲ್ಲಿ ಸಂಬಂಧಿಕರಲ್ಲಿ ಓರ್ವ ಮೃತಪಟ್ಟಿದ್ದು, ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಶಿರಸಿಯಿಂದ ಆಗಮಿಸುತ್ತಿದ್ದರು. ಈ ವೇಳೆ ಸಿಂಧನೂರು ತಾಲೂಕಿನ ಮಣ್ಣಿಕೇರಿ ಗ್ರಾಮ ಬಳಿ ರಸ್ತೆಗೆ ನಾಯಿ ಅಡ್ಡ ಬಂದಿದೆ. ನಾಯಿಯನ್ನು ರಕ್ಷಣೆ ಮಾಡಲು ಹೋದಾಗ ಕಾರು ಪಲ್ಪಿಯಾಗಿದೆ ಎನ್ನಲಾಗಿದೆ.

ಈ ಅವಘಡದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಘಟನೆ ಕುರಿತು ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jun 22, 2020, 8:07 PM IST

ABOUT THE AUTHOR

...view details