ರಾಯಚೂರು : ಜಿಲ್ಲೆಯ ನಾರಾಯಣಪುರ (ಬಸವಸಾಗರ) ಜಲಾಶಯದಿಂದ ಮೂರುವರೆ ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬಿಡಲಾಗಿದ್ದು, ನದಿ ಪಾತ್ರದ ಪ್ರದೇಶಗಳಾದ ಲಿಂಗಸುಗೂರು, ದೇವದುರ್ಗ, ರಾಯಚೂರು ತಾಲೂಕುಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ.
ಇಂದು ಬೆಳಗ್ಗೆ 7 ಗಂಟೆಗೆ ಜಲಾಶಯದಿಂದ 3.5 ಲಕ್ಷ ಕೂಸೆಕ್ ನೀರನ್ನು ಕ್ರಸ್ಟ್ ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ಹರಿಸಲಾಗಿದೆ. ಇದರ ಪರಿಣಾಮ ದೇವದುರ್ಗ ತಾಲೂಕಿನ ಹೂವಿನಹೆಡಗಿ ಸೇತುವೆ ಸಂಪೂರ್ಣ ಮುಳಗಡೆಯಾಗಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ದೇವದುರ್ಗದಿಂದ ಕಲಬುರಗಿ, ಶಹಾಪುರ, ಸುರಪುರಕ್ಕೆ ಸಂರ್ಪಕ ಕಲ್ಪಿಸುವ ಪ್ರಮುಖ ಸೇತುವೆ ಇದಾಗಿದೆ.