ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಸ್ಕಿ: 3 ಲಕ್ಷ ಮೌಲ್ಯದ ಅಕ್ರಮ ಮದ್ಯ ಜಪ್ತಿ
ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದ ಬಳಿ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 3 ಲಕ್ಷ ಮೌಲ್ಯದ 43 ಬಾಕ್ಸ್ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ.
ಚುನಾವಣೆಯಲ್ಲಿ ಹಂಚಲು ಸಾಗಿಸುತ್ತಿದ್ದ 3 ಲಕ್ಷ ಮೌಲ್ಯದ ಮದ್ಯ ಜಪ್ತಿ
ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದ ಬಳಿ ಚುನಾವಣೆಯಲ್ಲಿ ಮತದಾರರಿಗೆ ಹಂಚಲು 3 ಲಕ್ಷ ಮೌಲ್ಯದ 43 ಬಾಕ್ಸ್ ಅಕ್ರಮ ಮದ್ಯ ಸಾಗಿಸಲಾಗುತ್ತಿತ್ತು. ಈ ವೇಳೆ ಜಂಟಿ ದಾಳಿ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು, ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕೊರೊನಾಗೆ ಗಂಡ ಬಲಿ: 3 ವರ್ಷದ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಪತ್ನಿ