ರಾಯಚೂರು: ನಾರಾಯಣಪುರ ಜಲಾಶಯದಿಂದ ಇಂದು ಬೆಳಗ್ಗೆ 4.17 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿ ಬಿಡಲಾಗಿದ್ದು, ದೇವದುರ್ಗ, ಲಿಂಗಸೂಗೂರು, ರಾಯಚೂರು ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಮುಂದುವರೆದಿದೆ.
ನಾರಾಯಣಪುರ ಜಲಾಶಯದಲ್ಲಿ ಇಂದು ಬೆಳಗ್ಗೆ 6 ಗಂಟೆಗೆ 4 ಲಕ್ಷದ 17 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಇದರಿಂದಾಗಿ ಜಿಲ್ಲೆಯ ದೇವದುರ್ಗ ತಾಲೂಕಿನ ನದಿ ತೀರದಲ್ಲಿರುವ ಅಂಜಲಾ ಗ್ರಾಮಕ್ಕೆ ನೀರು ನುಗ್ಗುತ್ತಿದ್ದು, ಜನ-ಜೀವನ ಅಸ್ತವ್ಯಸ್ತವಾಗಿದೆ. ಕೆಲ ಮನೆಗಳು ನೀರಿನಿಂದ ಜಲಾವೃತಗೊಂಡಿದ್ದು, ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಸೇರಿದಂತೆ ಗೃಹಪಯೋಗಿ ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.