ಕರ್ನಾಟಕ

karnataka

ETV Bharat / state

ರಾಯಚೂರಿನಲ್ಲಿ ಇಂದು 42 ಕೊರೊನಾ ಕೇಸ್​​ ಪತ್ತೆ! - ಕೊರೊನಾ ಪಾಸಿಟಿವ್ ಪತ್ತೆ

ಇಂದು ರಾಯಚೂರಿನಲ್ಲಿ ಒಂದೇ ದಿನ 42 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಆಂಧ್ರ, ತೆಲಂಗಾಣ ರಾಜ್ಯದಿಂದ ವಾಪಸ್ ಬಂದಿರುವ ತಲಾ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.

42 Corona positives found in Raichur today
ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್

By

Published : Jul 4, 2020, 6:14 PM IST

ರಾಯಚೂರು:ಜಿಲ್ಲೆಯಲ್ಲಿ ಇಂದು ಒಂದೇ ದಿನ 42 ಕೊರೊನಾ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

ಸಿಂಧನೂರು 17, ಮಾನ್ವಿ 16, ರಾಯಚೂರು 5, ಲಿಂಗಸೂಗೂರು ತಾಲೂಕಿನಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಆಂಧ್ರ, ತೆಲಂಗಾಣ ರಾಜ್ಯದಿಂದ ವಾಪಸ್ ಬಂದಿರುವ ತಲಾ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್

ಸೋಂಕಿತರನ್ನು ಐಸೋಲೇಷನ್ ವಾರ್ಡ್​​​ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬಂದಿರುವ ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದ ಮಾಹಿತಿಯನ್ನ ಸಂಗ್ರಹಿಸಲಾಗುತ್ತಿದೆ ಎಂದರು.

ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎನ್ನುವುದಕ್ಕಿಂತ ಆರಂಭದ ಹಂತದಲ್ಲಿ ಇದೆ. ಪ್ರಾಥಮಿಕ ಸಂಪರ್ಕದಲ್ಲಿರುವವರಿಗೆ ಹೆಚ್ಚು ಸೋಂಕು ಹರಡುವ ಸಾಧ್ಯತೆಯಿದೆ. ಅಲ್ಲದೆ ಅಂತರ್ ಜಿಲ್ಲೆ ಪ್ರವಾಸ, ಅಂತರ್​ ರಾಜ್ಯದಿಂದ ಬರುವವರಲ್ಲಿ ಸೋಂಕು ಪತ್ತೆಯಾಗಿವೆ ಎಂದರು.

ಯಾರಿಗಾದರೂ ಕೊರೊನಾ ರೋಗದ ಲಕ್ಷಣಗಳು ಕಂಡು ಬಂದ್ರೆ ಆರಂಭದಲ್ಲಿ ಆಸ್ಪತ್ರೆಗೆ ಬಂದ್ರೆ ಯಾವುದೇ ತೊಂದರೆಯಾಗುವುದಿಲ್ಲ. ಹೀಗಾಗಿ ರೋಗದ ಗುಣಲಕ್ಷಣ ಆರಂಭದಲ್ಲಿ ಕಂಡು ಬಂದರೆ ಕೂಡಲೇ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ABOUT THE AUTHOR

...view details