ರಾಯಚೂರು:ಬಾಲ್ಯವಿವಾಹ ಪದ್ಧತಿಯನ್ನು ರಾಜ್ಯದಲ್ಲಿ ನಿಷೇಧಿಸಿದ್ದರೂ ಜಿಲ್ಲೆಯಲ್ಲಿ ಅದರ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಬಾಲ್ಯ ವಿವಾಹಗಳು ಕಳೆದ ವರ್ಷಕ್ಕಿಂತ ಈ ವರ್ಷದಲ್ಲೇ ಹೆಚ್ಚಾಗಿರುವುದು ಕಂಡು ಬಂದಿವೆ. ಅದು ಕೂಡ ಲಾಕ್ಡೌನ್ ಸಮಯದಲ್ಲಿ.
ರಾಯಚೂರು: ಶಾಲೆಗಳಿಲ್ಲದ ಹೊತ್ತಲ್ಲಿ ಬಾಲ್ಯ ವಿವಾಹ ಅವ್ಯಾಹತ - Raichur district news
ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ. ಅದಕ್ಕೆ ಕಾರಣವಾಗುವ ಪಾಲಕರ ವಿರುದ್ಧ ಪ್ರಕರಣ ದಾಖಲಿಸಿ ಶಿಕ್ಷೆ ನೀಡಲಾಗುತ್ತಿದೆ. ಜೊತೆಗೆ ಬಾಲ್ಯವಿವಾಹ ತಡೆಯುವ ಕೆಲಸ ಮಾಡಲಾಗುತ್ತಿದ್ದು, ಬಾಲ್ಯವಿವಾಹ ಮುಕ್ತಿಗೆ ಕಾಯ್ದೆ ರೂಪಿಸಲಾಗಿದೆ. ಆದರೆ, ಅದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಿದೆ.
ಏಪ್ರಿಲ್ 1ರಿಂದ ಈವರೆಗೂ 13 ಬಾಲ್ಯ ವಿವಾಹಗಳು ನಡೆದಿದ್ದು, ಬಾಲ್ಯ ನಿಷೇಧ ಕಾಯಿದೆ-2006 ಅಡಿ ಪ್ರಕರಣ ದಾಖಲಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲಾಣ್ಯ ಅಭಿವೃದ್ಧಿ ಇಲಾಖೆ ಹಾಗೂ ಇತರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ 45 ಬಾಲ್ಯವಿವಾಹಗಳಿಗೆ ಬ್ರೇಕ್ ಹಾಕಿದ್ದಾರೆ.
ಕಳೆದ ವರ್ಷ 35 ಬಾಲ್ಯ ವಿವಾಹಗಳನ್ನು ತಡೆಯಲಾಗಿತ್ತು. ಎರಡು ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದವು. ಪ್ರಸಕ್ತ ವರ್ಷದಲ್ಲಿ 58 ಬಾಲ್ಯ ವಿವಾಹಗಳ ಪ್ರಕರಣ ಬೆಳಕಿಗೆ ಬಂದಿವೆ. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂದು ಗೊತ್ತಿದ್ದರೂ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಹೆಚ್ಚಿಸಬೇಕಿದೆ.