ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 61 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾದ ಏಪ್ರೀಲ್ 24 ರಂದು 13 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. 7 ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ್ದ 74 ಅಭ್ಯರ್ಥಿಗಳ ಪೈಕಿ 13 ಜನರು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ. 61 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಈ ಅಭ್ಯರ್ಥಿಗಳು ಚುನಾವಣಾ ಅಂತಿಮ ಕಣದಲ್ಲಿದ್ದಾರೆ.
ಕ್ಷೇತ್ರವಾರು ನಾಮಪತ್ರ ಹಿಂಪಡೆದ ಅಭ್ಯರ್ಥಿಗಳ ವಿವರ: ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳ ನಾಪತ್ರಗಳು ಸಲ್ಲಿಸಿದ್ದು ಎಲ್ಲ ನಾಮಪತ್ರಗಳು ಕ್ರಮಬದ್ಧವಾಗಿವೆ. 8 ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದುಕೊಂಡಿಲ್ಲ.
ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 21 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಮೂವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, ಒಟ್ಟು 18 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಮಾನವಿ ವಿಧಾನಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಮೂವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ. 6 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದುಕೊಂಡಿದ್ದಾರೆ. ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 6 ಅಭ್ಯರ್ಥಿಗಳು ನಾಪಮತ್ರ ಕ್ರಮಬದ್ಧವಾಗಿವೆ. ಒಬ್ಬ ಅಭ್ಯರ್ಥಿ ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 5 ಜನ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ನಾಮಪತ್ರ ಸಲ್ಲಿಸಿದ ಒಬ್ಬ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಸದ್ಯ 7 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಅದರಲ್ಲಿ 5 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. ಅಂತಿಮವಾಗಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ೭ ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಅಲ್ಲದೇ ಈ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆದಿಲ್ಲ. ಹೀಗಾಗಿ ಒಟ್ಟು 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದುಕೊಂಡಿದ್ದರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.