ಕರ್ನಾಟಕ

karnataka

ETV Bharat / state

ಇಂದು 68 ಸೋಂಕಿತರ ಪತ್ತೆ

ಇಂದು 68 ಜನರಲ್ಲಿ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 1570ಕ್ಕೆ ಏರಿಕೆಯಾಗಿದೆ. ಈ ಪೈಕಿ 841 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.

By

Published : Jul 25, 2020, 7:05 PM IST

Raichur corona case
Raichur corona case

ರಾಯಚೂರು: ಜಿಲ್ಲೆಯಲ್ಲಿಂದು 68 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ಸೋಂಕಿತರ ಸಂಖ್ಯೆ 1570ಕ್ಕೆ ಏರಿಕೆಯಾಗಿದೆ.

ಇಂದು ರಾಯಚೂರು ತಾಲೂಕಿನಲ್ಲಿ 49, ಮಾನವಿ 9, ದೇವದುರ್ಗ 6, ಲಿಂಗಸೂಗೂರಿನಲ್ಲಿ 4 ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ 841 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಸದ್ಯ 711 ಸಕ್ರಿಯ ಪ್ರಕರಣಗಳಿದ್ದು, 18 ಜನ ಮೃತಪಟ್ಟಿದ್ದಾರೆ.

ಪತ್ತೆಯಾಗಿರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಹಾಗೂ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details