ಕರ್ನಾಟಕ

karnataka

ETV Bharat / state

7ನೇ ಆರ್ಥಿಕ ಗಣತಿ ಕಾರ್ಯಕ್ರಮ: ಯಶಸ್ಸಿಗೆ ಶ್ರಮವಹಿಸಲು ಅಪರ ಜಿಲ್ಲಾಧಿಕಾರಿ ಕರೆ

ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ 7 ನೇ ಆರ್ಥಿಕ ಜನಗಣತಿ-2019 ರ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

By

Published : Jul 13, 2019, 2:50 AM IST

ಆರ್ಥಿಕ ಜನಗಣತಿ-2019

ರಾಯಚೂರು: 7ನೇ ಆರ್ಥಿಕ ಗಣತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದ ತರಬೇತಿದಾರರು ಯಶಸ್ವಿಯಾಗಿ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ 7 ನೇ ಆರ್ಥಿಕ ಜನಗಣತಿ-2019 ರ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ಪ್ರತಿಯೊಂದು ಹಳ್ಳಿಯಲ್ಲೂ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. 10 ನೇ ತರಗತಿವರೆಗೆ ಶಿಕ್ಷಣ ಪಡೆದವರು ಹಾಗೂ ಆಂಡ್ರಾಯ್ಡ್ ಫೋನ್ ಹೊಂದಿರುವವರು ಈ ಗಣತಿಯಲ್ಲಿ ಪಾಲ್ಗೊಳ್ಳಬಹುದು ಎಂದರು.

7ನೇ ಆರ್ಥಿಕ ಗಣತಿ ಕಾರ್ಯಕ್ರಮ

ಸಹಾಯಕ ಆಯುಕ್ತರಾದ ಶಿಲ್ಪಾ ಶರ್ಮಾ ಮಾತನಾಡಿ, ದೇಶಾದ್ಯಂತ 7 ನೇ ಆರ್ಥಿಕ ಜನಗಣತಿ ಕಾರ್ಯಾಗಾರ ನಡೆಯುತ್ತಿದೆ. ಇದು ದೇಶದ ಎಲ್ಲಾ ಸಾಮಾನ್ಯ ಜನರಿಂದ ಹಿಡಿದು ವ್ಯವಹಾರ ಮಾಡುವ ಜನರಿಗೆ ಅನ್ವಯಿಸುತ್ತದೆ. ಆದ್ದರಿಂದ ತರಬೇತಿದಾರರು ಮನೆ ಮನೆಗೆ ಭೇಟಿ ನೀಡಿ ಸರಿಯಾದ ಮಾಹಿತಿಯ ದತ್ತಾಂಶವನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ಒಪ್ಪಿಸಬೇಕು ಎಂದು ತರಬೇತುದಾರರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೇಶ್‍ಕುಮಾರ್, ರಾಯಚೂರು ತಾಲೂಕು ತಹಶೀಲ್ದಾರರಾದ ಡಾ.ಹಂಪಣ್ಣ, ಕಾರ್ಮಿಕ ನಿರೀಕ್ಷಕರಾದ ವೆಂಕಟಸ್ವಾಮಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶ್ರೀನಿವಾಸ, ಜಿಲ್ಲಾ ಮಟ್ಟದ ಅಧಿಕಾರಿ ನಾಗರಾಜ ಸೇರಿದಂತೆ ತರಬೇತಿಗೆ ಆಗಮಿಸಿದ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸದಸ್ಯರು ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

...view details