ಕರ್ನಾಟಕ

karnataka

ಗ್ರಾಪಂ ಚುನಾವಣೆಗೆ ದಿನಗಣನೆ: ರಾಯಚೂರಿನಲ್ಲಿ 8 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

By

Published : Dec 18, 2020, 5:40 PM IST

ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಯಚೂರಿನಲ್ಲಿ ಅಬಕಾರಿ ಇಲಾಖೆಯಿಂದ 8 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.

ರಾಯಚೂರಿನಲ್ಲಿ ಅಬಕಾರಿ ಇಲಾಖೆಯಿಂದ 8 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ
ರಾಯಚೂರಿನಲ್ಲಿ ಅಬಕಾರಿ ಇಲಾಖೆಯಿಂದ 8 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ರಾಯಚೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮದ್ಯ ಹಂಚಿಕೆ, ಮಾರಾಟ ಹಾಗೂ ಸಾಗಾಣಿಕೆ ಸಮಯದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ ಮಾಡಿ 63 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಯಚೂರಿನಲ್ಲಿ ಅಬಕಾರಿ ಇಲಾಖೆಯಿಂದ ಮದ್ಯ ವಶ

ದಾಳಿ ವೇಳೆ 7 ವಾಹನಗಳನ್ನು ವಶಕ್ಕೆ ಪಡೆದಿದ್ದು, ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿ ಇರುವ ಬೆನ್ನಲ್ಲೇ ಅಧಿಕಾರಿಗಳು ಅಪಾರ ಪ್ರಮಾಣದ ಮದ್ಯ ವಶಕ್ಕೆ ಪಡೆದಿದ್ದಾರೆ.

ರಾಯಚೂರಿನಲ್ಲಿ ಅಬಕಾರಿ ಇಲಾಖೆಯಿಂದ ಮದ್ಯ ವಶ

ಇದನ್ನೂ ಓದಿ:ಬಾದಾಮಿಯಲ್ಲಿ ಸೋತಿದ್ದರೆ ನನ್ನ ರಾಜಕೀಯ ಭವಿಷ್ಯವೇ ಮಂಕಾಗುತ್ತಿತ್ತು: ಸಿದ್ದರಾಮಯ್ಯ

ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಅಕ್ರಮ ಮದ್ಯ ಹಂಚಿಕೆ, ಸಾಗಾಣಿಕೆ ಮತ್ತು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಜಿಲ್ಲೆಯಾದ್ಯಂತ ದಾಳಿ ಮಾಡಿ ಇಲ್ಲಿಯವರೆಗೆ 69 ಪ್ರಕರಣಗಳನ್ನು ದಾಖಲಿಸಿಕೊಂಡು 416 ಲೀಟರ್ ಮದ್ಯ, 15 ಲೀಟರ್ ಕಳ್ಳಭಟ್ಟಿ, 15 ಲೀಟರ್ ಸೇಂದಿ ಹಾಗೂ 3 ಕೆಜಿ ಸಿಹೆಚ್ ಪೌಡರ್, 88 ಲೀಟರ್ ಬಿಯರ್ ಮತ್ತು 7 ವಾಹನಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು 8 ಲಕ್ಷ ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.

ABOUT THE AUTHOR

...view details