ರಾಯಚೂರು:ಜಿಲ್ಲೆಯಲ್ಲಿಂದು 88 ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 12,094ಕ್ಕೆ ತಲುಪಿದೆ.
ರಾಯಚೂರು ತಾಲೂಕಿನಲ್ಲಿ 36, ಮಾನವಿ 18, ಲಿಂಗಸೂಗೂರು 11, ಸಿಂಧನೂರು 19, ದೇವದುರ್ಗ 4 ಪ್ರಕರಣಗಳು ಸೇರಿದಂತೆ ಒಟ್ಟು 88 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 10,515 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 1,440 ಪ್ರಕರಣಗಳು ಸಕ್ರಿಯವಾಗಿವೆ.
ಇಂದು ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಈ ಮೂಲಕ ಮೃತರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ. ರಿಮ್ಸ್, ಓಪೆಕ್ ಕೋವಿಡ್ ಆಸ್ಪತ್ರೆಯಲ್ಲಿ 346 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್ನಲ್ಲಿ 71ಜನರನ್ನಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎನ್ಎಂಸಿಹೆಚ್, ಖಾಸಗಿ ಕೋವಿಡ್ ಆಸ್ಪತ್ರೆ, ಹೋಟೆಲ್ ಕ್ವಾರಂಟೈನ್ನಲ್ಲಿ 171 ಜನ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಮ್ ಕ್ವಾರಂಟೈನ್ನಲ್ಲಿ 852 ಮಂದಿ ಇದ್ದಾರೆ.
ಇಂದು ಪತ್ತೆಯಾಗಿರುವ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.