ರಾಯಚೂರು: ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬಳಿ ನಿಂತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ತೂರಿಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ನಗರದ ಹೊರವಲಯದಲ್ಲಿ ನಡೆದಿದೆ. ಜಿಲ್ಲೆಯ ಸಿಂಧನೂರು ತಾಲೂಕಿನ 4ನೇ ಮೈಲ್ ಕ್ರಾಸ್ ಬಳಿ ಈ ಘಟನೆ ಬುಧವಾರ ರಾತ್ರಿ ಜರುಗಿದೆ.
ತಂದೆ ಹನುಮಂತ, ಮಕ್ಕಳಾದ ಸಂಜೀವ್ ಹಾಗೂ ಯಶವಂತ್ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಸ್ಥಳೀಯರು ಆ್ಯಂಬುಲೆನ್ಸ್ಗೆ ಕರೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಬಳ್ಳಾರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.