ಕರ್ನಾಟಕ

karnataka

ETV Bharat / state

2 ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: 8 ಜನ ಕೂಲಿ ಕಾರ್ಮಿಕರಿಗೆ ಗಾಯ - 8 workers injured

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಎರಡು ಪಿಕಪ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 8 ಜನ ಕೂಲಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ.

ಮುಖಾಮುಖಿ ಡಿಕ್ಕಿ
ಮುಖಾಮುಖಿ ಡಿಕ್ಕಿ

By

Published : Dec 26, 2020, 9:17 PM IST

ರಾಯಚೂರು:ಎರಡು ಪಿಕಪ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 8 ಜನ ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ, ಜಿಲ್ಲೆಯ ದೇವದುರ್ಗ ತಾಲೂಕಿನ ಜಾಡಲದಿನ್ನಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಕೂಲಿ ಕಾರ್ಮಿಕರು ಮಲ್ಲಾಪುರ ಗ್ರಾಮದವರೆಂದು ತಿಳಿದು ಬಂದಿದೆ. ಇವರಲ್ಲಿ ನಾಲ್ವರಿಗೆ ಗಂಭೀರ‌ ಸ್ವರೂಪದ‌ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರ್ಮಿಕರಿಗೆ ಗಾಯ

ಗಂಭೀರ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ABOUT THE AUTHOR

...view details