ರಾಯಚೂರು: ಜಿಲ್ಲೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಕ್ರಮ ಗಾಂಜಾ ಮಾರಾಟ: ಓರ್ವ ಅರೆಸ್ಟ್ - Raichur marijuana sale news
ಸಿಂಧನೂರು ತಾಲೂಕಿನ ಆರ್.ಹೆಚ್.ಕ್ಯಾಂಪ್ನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
Arrest
ಓಂ ಪ್ರಕಾಶ ಬಂಧಿತ ಆರೋಪಿ. ಈತ ತಾಲೂಕಿನ ಆರ್.ಹೆಚ್.ಕ್ಯಾಂಪ್ನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ, 607 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಅವರ ಮಾರ್ಗದಶನದಲ್ಲಿ ಸಿಪಿಐ ಸಿಂಧನೂರು ಬಾಲಚಂದ್ರ, ಡಿ.ಲಕ್ಕಂ ಹಾಗೂ ಪಿಎಸ್‌ಐ ಜಿ.ಎಸ್.ರಾಘವೇಂದ್ರ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Last Updated : Sep 12, 2020, 4:39 PM IST