ರಾಯಚೂರು: ಜಿಲ್ಲೆಯ ಮಸ್ಕಿಯ ಹಾಲಾಪುರ ಗ್ರಾಮದ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಭಾವಚಿತ್ರವಿರುವ ಮತದಾರರ ಚೀಟಿ ಹಂಚಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಮತಗಟ್ಟೆಗೆ ಆಮಿಗಮಿಸುತ್ತಿದ್ದ ಮತದಾರರಿಗೆ ಕಾಂಗ್ರೆಸ್ ಚಿಹ್ನೆ ಇರುವ ಮತದಾರರ ಚೀಟಿ ಹಂಚಲಾಗುತ್ತಿದೆ ಎಂದು ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.