ರಾಯಚೂರು:ಅಡ್ಡ ಬಂದ ನಾಯಿ ಉಳಿಸಲು ಹೋಗಿ ನಿಯಂತ್ರಣ ಕಳೆದುಕೊಂಡಿದ್ದರಿಂದ ಕಾರು ಪಲ್ಟಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದಲ್ಲಿ ಸಂಭವಿಸಿದೆ.
ರಾಯಚೂರಿನ ಏಗನೂರು ಟೆಂಪಲ್ ಹತ್ತಿರದ ಲಕ್ಷ್ಮೀಪುರಂ ಲೇಔಟ್ ನಿವಾಸಿ ಸುಧೀಂದ್ರ(44) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ತುಂಗಭದ್ರಾ ಗ್ರಾಮದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.