ರಾಯಚೂರು:ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ರಾಯಚೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ನೇತಾಜಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಸಮೀರ್(36) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ವಾಸವಿ ನಗರದ ಪೊಲೀಸ್ ವಸತಿ ಗೃಹದ ಬಳಿಯಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ನೇತಾಜಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.