ರಾಯಚೂರು: 12 ವರ್ಷದ ಅಪ್ರಾಪ್ತೆ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕ ಅರೆಸ್ಟ್ - ರಾಯಚೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ
ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನ ಬಂಧನ
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬುದ್ಧಿಮಾಂದ್ಯ ಹಾಗೂ ಮಾತು ಬಾರದ ಬಾಲಕಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅದೇ ಗ್ರಾಮದ ಹನುಮಂತ(40) ಎಂಬಾತ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಬಾಲಕಿಯನ್ನ ಕರೆದುಕೊಂಡು ಹೋದ ವಿಷಯವನ್ನು ಆಕೆಯ ಸ್ನೇಹಿತರು ಪೋಷಕರಿಗೆ ತಿಳಿಸಿದ್ದಾರೆ. ಈ ವೇಳೆ ಬಾಲಕಿಯನ್ನ ಹುಡುಕುತ್ತಾ ಹೋದಾಗ ಕಾಮುಕ ಸೆರೆಸಿಕ್ಕಿದ್ದಾನೆ. ಘಟನೆಯ ಕುರಿತು ಬಾಲಕಿ ಸಂಬಂಧಿಕರು ಹಟ್ಟಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.