ಕರ್ನಾಟಕ

karnataka

ETV Bharat / state

ಕಾರು ಪಲ್ಟಿಯಾಗಿ ತಂದೆ ಸಾವು : ಬದುಕುಳಿದ ಮಗ - raichur accident one person died

ಕಾರು ಪಲ್ಟಿಯಾಗಿ ತಂದೆ ಮೃತಪಟ್ಟು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಕಾರು ಪಲ್ಟಿಯಾಗಿ ತಂದೆ ಸಾವು, ಬದುಕುಳಿದ ಮಗ
one person died in an accident in Raichur

By

Published : Dec 9, 2019, 2:28 PM IST

ರಾಯಚೂರು: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ತಂದೆ ಮೃತಪಟ್ಟು, ಮಗ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಶರಣಪ್ಪ ಪಡಶೆಟ್ಟಿ(55) ಮೃತ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಮಗ ಅನಿಲ್‌ಕುಮಾರ್​ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಇಬ್ಬರೂ ಬೆಳಗ್ಗೆ ಗಬ್ಬೂರಿನಿಂದ ದೇವದುರ್ಗ ಪಟ್ಟಣಕ್ಕೆ ಕಾರಿನಲ್ಲಿ ತೆರಳುತ್ತಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಈ ಕುರಿತು ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರಿನಲ್ಲಿ ಕಾರು ಪಲ್ಟಿಯಾಗಿ ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ABOUT THE AUTHOR

...view details