ರಾಯಚೂರು:ವಿದೇಶದಿಂದ ಮರಳಿದ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ತಗುಲಿರುವ ಶಂಕೆ ವ್ಯಕ್ತಿವಾಗಿದ್ದು, ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ವಿದೇಶದಿಂದ ರಾಯಚೂರಿಗೆ ಬಂದ ವ್ಯಕ್ತಿಗೆ ಸೋಂಕು ಶಂಕೆ
ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕಿತ ಪ್ರಕರಣಗಳ ಸಂಖ್ಯೆ ದಿನೆ ದಿನೇ ಏರತೊಡಗುತ್ತಿವೆ. ಅದೇ ರೀತಿ ರಾಯಚೂರಿನ ವ್ಯಕ್ತಿಯೊಬ್ಬರಲ್ಲೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.
ರಾಯಚೂರು ಜಿಲ್ಲೆಗೆ ವಿದೇಶದಿಂದ ಇಂದು 29 ಮಂದಿ ಆಗಮಿಸಿದ್ದು, ಒಟ್ಟು 100 ಮಂದಿ ರಾಯಚೂರಿಗೆ ಮರಳಿದಂತಾಗಿದೆ. ಇಷ್ಟೂ ಮಂದಿಯಲ್ಲಿ ಓರ್ವನಿಗೆ ವೈರಸ್ ತಗುಲಿರುವ ಶಂಕೆ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿ, ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನ ಬೆಂಗಳೂರಿನ ಲ್ಯಾಬ್ಗೆ ಕಳುಹಿಸಲಾಗಿದೆ.
ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲಾಗಿದೆ. ಅವರನ್ನು ಮನೆಯಲ್ಲೇ ಇರಿಸಿ, ಹೊರ ಬರದಂತೆ ಸೂಚನೆ ನೀಡಲಾಗಿದೆ. ಜೊತೆಗೆ ಪೊಲೀಸ್ ಇಲಾಖೆಯಿಂದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ನಿತ್ಯ ತಪಾಸಣೆ ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಪ್ರತಿಕಾ ಪ್ರಕಟಣೆ ತಿಳಿಸಿದ್ದಾರೆ.