ಕರ್ನಾಟಕ

karnataka

ETV Bharat / state

ಸಿಗದ ಅಭ್ಯಾಸ ಪ್ರಮಾಣ ಪತ್ರ: ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ - ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡದೆ ನಿರ್ಲಕ್ಷ್ಯ

ಪದವಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಯುವಕ ಅಭ್ಯಾಸ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗದೇ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಚನ್ನಬಸವ
ಚನ್ನಬಸವ

By ETV Bharat Karnataka Team

Published : Aug 25, 2023, 10:45 PM IST

ರಾಯಚೂರು :ಪದವಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಭಾವಿ ಶಿಕ್ಷಕನೋರ್ವ ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲಗೊಂಡು, ಆಡಳಿತ ವ್ಯವಸ್ಥೆಯಿಂದ ರೋಸಿ ಹೋಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಜರುಗಿದೆ.

ದೇವದುರ್ಗ ಪಟ್ಟಣದಲ್ಲಿ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಸಾವಿಗೆ ಶರಣಾಗಿದ್ದಾನೆ. ಚಿಕ್ಕಬೂದುರು ಗ್ರಾಮದ ನಿವಾಸಿ ಚನ್ನಬಸವ (26) ಮೃತ ಯುವಕನೆಂದು ಗುರುತಿಸಲಾಗಿದೆ.

ಚನ್ನಬಸವ ಪದವಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದರು. ಕಳೆದ ಒಂದು ವರ್ಷದಿಂದ ನೇಮಕಾತಿ ಪ್ರಕ್ರಿಯೆ ಮುಂದೂಡುತ್ತಲೇ ಬಂದಿದ್ದು, ಇದರಿಂದ ರೋಸಿ ಹೋಗಿದ್ದರು. ಬೆಂಗಳೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದು, ಶಾಲೆಗೆ ಹೋಗಿ ಅಭ್ಯಾಸ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ್ದರು. ಸಕಾಲಕ್ಕೆ ಪ್ರಮಾಣ ಪತ್ರ ದೊರೆಯದ ಕಾರಣ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

2022ರಲ್ಲಿ ಪದವಿ ಶಿಕ್ಷಕರ ನೇಮಕಾತಿಯಲ್ಲಿ ಪರೀಕ್ಷೆ ಎದುರಿಸಿ ಆಯ್ಕೆಯಾಗಿದ್ದ ಚನ್ನಬಸವ, ಶಿಕ್ಷಕನಾಗುವ ಕನಸು ಕಂಡಿದ್ದರು. ಕನ್ನಡ ಮಾಧ್ಯಮ ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ಸಾಕಷ್ಟು ಪ್ರಯತ್ನ ನಡೆಸಿದ್ದರು. ಸಂಬಂಧಿತ ಇಲಾಖೆಗಳ ವಿಳಂಬ ಧೋರಣೆಯಿಂದ ಅಭ್ಯರ್ಥಿ ಬೇಸತ್ತಿದ್ದರು ಎಂಬ ಮಾಹಿತಿ ದೊರೆತಿದೆ.

ಮಾನಸಿಕ ಖಿನ್ನತೆಗೊಳಗಾಗಿ ಅಭ್ಯರ್ಥಿಗಳು ಸಾವಿಗೀಡಾಗಿರುವುದು ಕಳವಳಕಾರಿಯಾಗಿದೆ. ಆಡಳಿತ ವ್ಯವಸ್ಥೆ ಹಣ ಪಡೆಯುವಿಕೆಗೆ ಕಡಿವಾಣ ಹಾಕಿ, ಕಾನೂ‌ನುಬದ್ಧ ಅರ್ಹ ಅಭ್ಯರ್ಥಿಗಳಿಗೆ ಸುಲಭವಾಗಿ ಪ್ರಮಾಣ ಪತ್ರ ದೊರೆಯುವ ವ್ಯವಸ್ಥೆ ಜಾರಿಗೆ ತರಬೇಕು. ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡದೇ ನಿರ್ಲಕ್ಷ್ಯ ತೋರಿಸುತ್ತಿರುವ ವ್ಯವಸ್ಥೆಯ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಜೇವರ್ಗಿ ಶಾಸಕರ ಮನೆಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಡೆತ್​ನೋಟ್​ ಬರೆದಿಟ್ಟು ಚಾಲಕ ಆತ್ಮಹತ್ಯೆ:ಕಾರು ಚಾಲಕನೊಬ್ಬ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ (ಆಗಸ್ಟ್​ 22-2023) ನಡೆದಿತ್ತು. ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರೀನ್ ವ್ಯೂ ಅಪಾರ್ಟ್​ಮೆಂಟ್ ಟೆರೇಸ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೇರಳ ಮೂಲದ‌ ಜೊಮೊನ್ ವರ್ಗಿಸ್ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದುಬಂದಿತ್ತು.

ಇದನ್ನೂ ಓದಿ:ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಚಾಲಕ ಆತ್ಮಹತ್ಯೆ

ABOUT THE AUTHOR

...view details