ರಾಯಚೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗೋಶಾಲಾ ರಸ್ತೆ ಬಳಿ ನಡೆದಿದೆ.
ಹಳೆ ವೈಷಮ್ಯ: ಯುವಕನ ಬರ್ಬರ ಹತ್ಯೆ..! - news kannada'
ಹಳೆ ವೈಷಮ್ಯದ ಹಿನ್ನೆಲೆ ನಗರದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ತಿವಿದು ಹತ್ಯೆ ಮಾಡಲಾಗಿದೆ.
ಗೋಶಾಲಾ ರಸ್ತೆ ಬಳಿ ನಡೆದ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು.
ಮುನಿರ್ (30) ಹತ ಯುವಕ. ಶಫೀ ಎಂಬುವನೇ ಹತ್ಯೆಗೈದ ಆರೋಪಿ ಎಂದು ತಿಳಿದು ಬಂದಿದೆ. ಆರೋಪಿ ಶಫೀ ನಿನ್ನೆ ರಾತ್ರಿ ಮುನಿರ್ಗೆ ಚಾಕುವಿನಿಂದ ತಿವಿದು ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.