ರಾಯಚೂರು:ರೈತರಿಗೆ ಪಹಣಿ ಪತ್ರ ಬಹಳ ಮುಖ್ಯವಾಗಿದ್ದು, ಅದರಲ್ಲಿ ಏನಾದರೂ ಲೋಪ ದೋಷಗಳು ಇದ್ದರೆ ಅರ್ಜಿ ಸಲ್ಲಿಸಿದ ಕೂಡಲೇ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಸಹಾಯಕ ಆಯುಕ್ತ ಸಂತೋಷ ಕಾಮಗೌಡ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಆಯುಕ್ತರ ಕಚೇರಿಯಲ್ಲಿ ಆರ್.ಟಿ.ಸಿ ಮತ್ತು ಪಹಣಿ ತಿದ್ದುಪಡಿ ಪ್ರಕರಣಗಳ ತ್ವರಿತ ವಿಲೇವಾರಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತರಿಗೆ ಪಹಣಿ ಅತಿ ಅವಶ್ಯಕವಾಗಿದ್ದು, ಅದರಲ್ಲಿ ಇರುವ ಲೋಪಗಳನ್ನು ಸರಿಪಡಿಸಲು ಅರ್ಜಿ ಸಲ್ಲಿಸಿದ ನಂತರ ಅಧಿಕಾರಿಗಳು ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.