ರಾಯಚೂರು: ಇಂದು ಬೆಳ್ಳಂಬೆಳ್ಳಗೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿದಂತೆ 75 ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿಸಿದೆ.
ಕೃಷ್ಣಾ ಭಾಗ್ಯ ಜಲ ನಿಗಮ ಲಿಮಿಟೆಡ್ (ಕೆಬಿಜೆಎನ್ಎಲ್)ನ ಎಇಇ ಅಶೋಕ್ ರೆಡ್ಡಿ ಪಾಟೀಲ್.ಎನ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ 7 ಗಂಟೆಗೆ ರಾಯಚೂರು ನಗರದ ಬಸವೇಶ್ವರ ಕಾಲೋನಿಯಲ್ಲಿರುವ ಮನೆ ಹಾಗೂ ದೇವದುರ್ಗ ತಾಲೂಕಿನ ಕಚೇರಿಯ ಮೇಲೆ ದಾಳಿ ನಡೆಸಿದ್ದು, ಸದ್ಯ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.