ಕರ್ನಾಟಕ

karnataka

ETV Bharat / state

ರಾಯಚೂರು ಆರ್​ಟಿಒ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳಿಂದ ದಿಢೀರ್​ ದಾಳಿ - ACB Rai news In Raichur

ರಾಯಚೂರು ಪ್ರಾದೇಶಿಕ ಸಾರಿಗೆ ಕಚೇರಿ(ಆರ್​ಟಿಒ) ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಿಂದ ದಾಳಿ ನಡೆದಿದೆ.

ACB Raid On  RTO Office In Raichur
ಆರ್​ಟಿಒ ಕಚೇರಿ ಮೇಲೆ ಎಸಿಬಿ ದಿಢೀರ್​ ದಾಳಿ

By

Published : Dec 27, 2019, 3:26 PM IST

ರಾಯಚೂರು: ಪ್ರಾದೇಶಿಕ ಸಾರಿಗೆ ಕಚೇರಿ (ಆರ್​ಟಿಒ) ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯಿಂದ ದಾಳಿ ನಡೆದಿದೆ.

ನಗರದ ಹೊರವಲಯದ ಮಂತ್ರಾಲಯ ರಸ್ತೆಯಲ್ಲಿರುವ ಆರ್​ಟಿಒ ಕಚೇರಿ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಎಸಿಬಿ ಡಿವೈಎಸ್​ಪಿ ಸಂತೋಷ್​ ಬನ್ನಟ್ಟಿ ನೇತೃತ್ವದಲ್ಲಿ 30 ಅಧಿಕಾರಿಗಳನ್ನೊಳಗೊಂಡ ತಂಡ ಬೀದರ್, ಬಳ್ಳಾರಿ, ಯಾದಗಿರಿ, ಕೊಪ್ಪಳ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿದ್ದಾರೆ.

ಆರ್​ಟಿಒ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಿಢೀರ್​ ದಾಳಿ

ಆರ್​ಟಿಒ ಕಚೇರಿಯಲ್ಲಿ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಹಾವಳಿ ಕುರಿತಂತೆ ಹಲವು ದೂರುಗಳು ಕೇಳಿ ಬಂದಿದ್ದವು. ಈ ದೂರಿನ ಆಧಾರದ ಮೇಲೆ ಇಂದು ಎಸಿಬಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಎಸಿಬಿ ದಾಳಿ ಹಿನ್ನೆಲೆ ಆರ್​ಟಿಒ ಕಚೇರಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ.

ABOUT THE AUTHOR

...view details