ರಾಯಚೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ದರ್ಶನವನ್ನ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಮಂತ್ರಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ: ಪೀಠಾಧಿಪತಿ ಸೂಚನೆ - ಮಂತ್ರಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಶೇಧ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದ್ದಾರೆ.
ಮಂತ್ರಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಶೇಧ: ಪೀಠಾಧಿಪತಿ ಸೂಚನೆ
ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆಯ ಸೂಚನೆಯಂತೆ ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಎಂದಿನಂತೆ ರಾಯರರಿಗೆ ನಿತ್ಯ ಪೂಜೆ ಜರುಗಲಿದ್ದು, ಪರಿಸ್ಥಿತಿ ಸುಧಾರಿಸಿದ ನಂತರ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.