ರಾಯಚೂರು:ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೆಗ್ಗಸನಹಳ್ಳಿ ಗ್ರಾಮದ ಬಳಿಯ ಬ್ರಿಡ್ಜ್ ಮೇಲೆ ಈ ಘಟನೆ ನಡೆದಿದೆ. ಮಧ್ಯಪ್ರದೇಶ ಮೂಲದ ಅಮಿತ್(23), ರೋಹಿತ್(22) ಮೃತಪಟ್ಟ ಬೈಕ್ ಸವಾರರು.