ಕರ್ನಾಟಕ

karnataka

ETV Bharat / state

ಲಾರಿ-ಬೈಕ್​​​ ನಡುವೆ ಡಿಕ್ಕಿ: ಬಾಲಕ ಸ್ಥಳದಲ್ಲೇ ಸಾವು - ಅಪಘಾತ ಬಾಲಕ ಸ್ಥಳದಲ್ಲೇ ಸಾವು

ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಹಿಂಬದಿ ಕುಳಿತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಲಿಂಗಸೂಗೂರು ತಾಲೂಕಿನ ಜನತಾಪುರ ಗ್ರಾಮದ ಬಳಿ ನಡೆದಿದೆ.

boy
ಬಾಲಕ ಸಾವು

By

Published : Dec 2, 2019, 9:45 PM IST

ರಾಯಚೂರು:ಕಂಟೈನರ್​​ ಲಾರಿ, ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಹಿಂಬದಿ ಕುಳಿತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಜನತಾಪುರ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಸುವರ್ಣ ಸ್ವಾಮಿ (13) ಮೃತ ಬಾಲಕನೆಂದು ಗುರುತಿಸಲಾಗಿದೆ. ತಂದೆ-ಮಗ ಬೈಕ್ ಮೇಲೆ ಮುದಗಲ್ ಗ್ರಾಮದಿಂದ ಬನ್ನಿಗೋಳ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಕಂಟೈನರ್​​ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್​ನ ಹಿಂಬದಿಯಲ್ಲಿ ಕುಳಿತಿದ್ದ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಂದೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.

ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ABOUT THE AUTHOR

...view details