ಕರ್ನಾಟಕ

karnataka

ETV Bharat / state

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು - Raichur

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರಿನ ಸಿರವಾರ ತಾಲೂಕಿನಲ್ಲಿ ನಡೆದಿದೆ ನಡೆದಿದೆ.

raichur
ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

By

Published : Jan 5, 2021, 4:34 PM IST

ರಾಯಚೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ-ಚಿಂಚರಕಿ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.

ಗುಡಿಯಾಳ ಗ್ರಾಮದ ಮಲೇಶ್ ಗುಡಿಯಾಳ (50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆ ಕವಿತಾಳ-ಚಿಂಚರಕಿ ರಸ್ತೆಯಲ್ಲಿ ತೆರಳುತ್ತಿರುವಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿತ್ತು.

ಈ ಬಗ್ಗೆ ಸ್ಥಳೀಯರು ಕವಿತಾಳ ಠಾಣೆಯ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details