ರಾಯಚೂರು:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ್ ಪರ ಚುನಾವಣಾ ಪ್ರಚಾರ ನಡೆಸಲು ನಗರಕ್ಕೆ ಆಗಮಿಸುತ್ತಿದ್ದಾರೆ.
ಇಂದು ರಾಯಚೂರಿಗೆ ರಾಹುಲ್ ಗಾಂಧಿ ಆಗಮನ - undefined
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ರಾಯಚೂರಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ್ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ರಾಹುಲ್ ಭಾಗವಹಿಸಲಿದ್ದಾರೆ. ರಾಹುಲ್ ಜತೆ ಮಾಜಿ ಪ್ರಧಾನಿ ಹೆಚ್.ಡಿ. ದೇವಗೌಡ, ಆಂಧ್ರ ಸಿಎಂ ಚಂದ್ರುಬಾಬು ನಾಯ್ಡು, ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಸಮಾವೇಶದಲ್ಲಿ ಭಾಗಹಿಸಲಿದ್ದಾರೆ. ಇದಕ್ಕಾಗಿ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಿದ್ದತೆ ನಡೆದಿದ್ದು, ಸುಮಾರು 50 ಸಾವಿರ ಜನರು ಸೇರುವ ನಿರೀಕ್ಷೆ ಇದೆ.
ರಾಹುಲ್ ಆಗಮನ ಹಿನ್ನೆಲೆಯಲ್ಲಿ ಭದ್ರತೆ ತಪಾಸಣೆ ನಡೆದಿದ್ದು, ವೇದಿಕೆ ಸುತ್ತ ಎಸ್ಜಿಪಿ ತಂಡ ಭದ್ರತೆ ಬಿಗಿಗೊಳಿಸಿದೆ. ಅಲ್ಲದೇ ಯಾವುದೇ ತೊಂದರೆಯಾಗದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.