ರಾಯಚೂರು: ಮಧ್ಯಪ್ರದೇಶದಲ್ಲಿ ಉದ್ಯೋಗಕ್ಕೆ ಆಗ್ರಹಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಎಐಡಿಎಸ್ಒ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಪೊಲೀಸ್ ದೌರ್ಜನ್ಯ ಖಂಡಿಸಿ ಎಐಡಿಎಸ್ಒ ಸಂಘಟನೆಯಿಂದ ಪ್ರತಿಭಟನೆ
ಮಧ್ಯಪ್ರದೇಶದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಎಐಡಿಎಸ್ಒ ಸಂಘಟನೆಯ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೊರೊನಾ ಹಿನ್ನೆಲೆ ಲಾಕ್ಡೌನ್ ಸಮಯದಲ್ಲಿ ದೇಶಾದ್ಯಂತ 2.7 ಲಕ್ಷ ಕಾರ್ಖಾನೆಗಳು ಮುಚ್ಚಲ್ಪಟಿವೆ. ಈ ನಡುವೆ ಮಧ್ಯಪ್ರದೇಶದಲ್ಲಿ ಉದ್ಯೋಗಕ್ಕೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಖಂಡನಾರ್ಹ. ಪ್ರತಿಭಟನಾಕಾರರ ಮೇಲೆ ಹೊರಿಸಿರುವ ಆರೋಪಗಳನ್ನು ಕೂಡಲೇ ಹಿಂಪಡೆಯಬೇಕು. ಹಾಗೂ ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಇನ್ನು ಶಿಕ್ಷಕರು, ರೈಲ್ವೆ ಮತ್ತು ಪೊಲೀಸ್ ನೇಮಕಾತಿ ಪರೀಕ್ಷೆಗಳ ಫಲಿತಾಂಶಗಳನ್ನು ತಕ್ಷಣವೇ ಪ್ರಕಟಿಸಬೇಕು. ದೇಶದಾದ್ಯಂತ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 23 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು.