ರಾಯಚೂರು: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲ ಬಸ್ಗಳ ಸಂಚಾರ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ನಗರದ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಹಿತದೃಷ್ಠಿಯಿಂದ ಎಲ್ಲ ಬಸ್ಗಳ ಸಂಚಾರ ಆರಂಭಿಸಲಾಗಿದೆ. ಈ ನಿಟ್ಟಿನಲ್ಲಿ ನೌಕರರನ್ನು ಮನವೊಲಿಸಲಾಗಿದೆ. ಜೊತೆಗೆ ಪೊಲೀಸ್ ಭದ್ರತೆಯಲ್ಲಿ ಬಸ್ಗಳ ಸಂಚಾರಕ್ಕೆ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದರು.
ಇದನ್ನು ಓದಿ:ಸಾರಿಗೆ ನೌಕರರ ಹೋರಾಟದ ಹಿಂದೆ ಯಾವುದೋ ರಾಜಕೀಯ ಪಕ್ಷವಿದೆ: ಶೋಭಾ ಶಂಕೆ
ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಸಾರಿಗೆ ಬಸ್ಗಳ ಸಂಚಾರವನ್ನ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಆರಂಭಿಸಲು ಸೂಚಿಸಲಾಗಿದೆ. ಜತೆಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬಸ್ಗೊಬ್ಬರು ಪೊಲೀಸ್ ಪೇದೆಯನ್ನ ನಿಯೋಜಿಸುವಂತೆ ತಿಳಿಸಲಾಗಿದೆ. ಯಾರಾದರೂ ಕಿಡಿಗೇಡಿ ಬಸ್ ಸಂಚಾರಕ್ಕೆ ಅಡ್ಡಿಯುಂಟು ಮಾಡುವುದು, ಕಲ್ಲು ಎಸೆಯುವಂತಹ ಕೃತ್ಯವೆಸಗಿದರೆ ಕಾನೂನಿನಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.