ರಾಯಚೂರು:ಜಿಲ್ಲೆಯ ಲಿಂಗಸೂಗೂರು ತಾಲೂಕಿನಲ್ಲಿ ಅಪರಿಚಿತ ವ್ಯಕ್ತಿಯ ದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೌಡೂರು ಗ್ರಾಮದ ಹೊರವಲಯದ ಗೌಡೂರು-ಗುರುಗುಂಟಾ ರಸ್ತೆಯ ಕಾಲುವೆ ಬಳಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಗೆ ಸುಮಾರು 40 ವರ್ಷ ವಯಸ್ಸಾಗಿರಬಹುದೆಂದು ಆಂದಾಜಿಸಲಾಗಿದೆ. ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಹಾಕಿ, ಸುಟ್ಟು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.