ರಾಯಚೂರು: ಕೊರೊನಾ ಸೋಂಕಿತರು ಹೆಚ್ಚುತ್ತಿರುವ ಬಗ್ಗೆ ಜನರು ಭಯಭೀತರಾಗಿದ್ದರೆ, ಈ ನಡುವೆ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಪದಗ್ರಹಣ ಮತ್ತು ಅಧಿಕಾರಿ ಸ್ವೀಕರಿಸುವ ಕಾರ್ಯಕ್ರಮ ಭರ್ಜರಿಯಾಗಿ ನಡೆದಿದೆ.
ಎಪಿಎಂಸಿ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಮಂಗ ಮಾಯ
ರಾಯಚೂರಿನ ಎಪಿಎಂಸಿ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮ ಇಂದು ನಗರದಲ್ಲಿ ಜರುಗಿದ್ದು, ಸಾಮಾಜಿಕ ಅಂತರವನ್ನು ಮರೆತ ಜನರು, ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಅಧಿಕಾರ ಸ್ವೀಕಾರದ ಹಿನ್ನೆಲೆ, ಅಧ್ಯಕ್ಷರ ಕೊಠಡಿಯಲ್ಲಿ ಪೂಜೆ ಕಾರ್ಯಕ್ರಮ ಬಳಿಕ ಎಪಿಎಂಸಿ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನೂತನ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷ, ಶಾಸಕ ಶಿವನಗೌಡ ನಾಯಕ, ಮಾಜಿ ಶಾಸಕ ತಿಪ್ಪರಾಜ್ ಹವಾಲ್ದಾರ್, ಬಿಜೆಪಿ ಮುಖಂಡರು, ಸೇರಿದಂತೆ ಹಲವು ಮುಖಂಡರು ವೇದಿಕೆ ಹಂಚಿಕೊಂಡಿದ್ದು, ಗಣ್ಯ ವ್ಯಕ್ತಿಗಳು ಸೇರಿದಂತೆ ಸೇರಿದ್ದ ಸಾರ್ವಜನಿಕರೂ ಸಹ ಸಾಮಾಜಿಕ ಅಂತರ, ಮಾಸ್ಕ್ ಧರಿಸುವ ನಿಯಮಗಳನ್ನು ಗಾಳಿಗೆ ತೂರಿದ್ದರು.
ಕಾರ್ಯಕ್ರಮಕ್ಕೆ ಬರುವವರಿಗೆ ಥರ್ಮಲ್ ಸ್ಕ್ಯಾನ್, ಸ್ಯಾನಿಟೈಸರ್, ಮಾಸ್ಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ನೆರದಿದ್ದ ಜನ ಮಾತ್ರ ಸಾಮಾಜಿಕ ಅಂತರವನ್ನ ಮರೆತು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.