ಕರ್ನಾಟಕ

karnataka

ETV Bharat / state

ರಾಯಚೂರು ಎಪಿಎಂಸಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ, ತನಿಖೆಗೆ ಆಗ್ರಹ - APMC

ರಾಯಚೂರು ಎಪಿಎಂಸಿಯಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು ರಾಜ್ಯಮಟ್ಟದಲ್ಲಿ ತನಿಖೆ ನಡೆಸಬೇಕೆಂದು ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ

Raichur
ರಾಯಚೂರು ಎಪಿಎಂಸಿ ನಿವೇಶನ ಹಂಚಿಕೆಯಲ್ಲಿ ಅಕ್ರಮ: ತನಿಖೆಗೆ ಆಗ್ರಹ

By

Published : Dec 13, 2019, 7:32 PM IST

ರಾಯಚೂರು:ಇಲ್ಲಿನ ಎಪಿಎಂಸಿಯಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು ರಾಜ್ಯಮಟ್ಟದಲ್ಲಿ ತನಿಖೆ ನಡೆಸಬೇಕೆಂದು ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ಈ ಕುರಿತು ಸಂಘದ ಅಧ್ಯಕ್ಷ ಎನ್.ಮಹಾವೀರ್ ಜೈನ್ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಎಪಿಎಂಸಿ ನಿವೇಶನದಲ್ಲಿ ಅಕ್ರಮ ನಡೆದಿದೆ. ವ್ಯಾಪಾರಸ್ಥರಿಗೆ ನೀಡಬೇಕಾಗಿದ್ದ ನಿವೇಶನಗಳು ರಿಯಲ್ ಎಸ್ಟೇಟ್ ಮಾಡುವರಿಗೆ, ಬಟ್ಟೆ ವ್ಯಾಪಾರಿ, ತರಕಾರಿ ಮಾರಾಟಗಾರರಲ್ಲದವರಿಗೆ ನೀಡಿದ್ದಾರೆ. ಈ ಕುರಿತು ಸಾಕಷ್ಟು ಬಾರಿ ದೂರು ನೀಡಿದ್ದರೂ ಜಿಲ್ಲಾಧಿಕಾರಿ ಹಾಗೂ ಎಪಿಎಂಸಿ ಕಾರ್ಯದರ್ಶಿಗಳು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ರಾಯಚೂರು ಎಪಿಎಂಸಿ ನಿವೇಶನ ಹಂಚಿಕೆಯಲ್ಲಿ ಅಕ್ರಮ: ತನಿಖೆಗೆ ಆಗ್ರಹ

ಈ ಬಗ್ಗೆ ಹಿಂದಿನ ಎಪಿಎಂಸಿ ಕಾರ್ಯದರ್ಶಿಗಳಿಗೆ ದೂರು ನೀಡಿದರೂ ತನಿಖೆ ಮಾಡಲಿಲ್ಲ. ಬದಲಾಗಿ ಹಾರಿಕೆಯ ಉತ್ತರ ನೀಡಿದ್ದಾರೆ. ಮಹಮ್ಮದ್ ಇಕ್ಬಾಲ್ ಸೇರಿದಂತೆ ಹಲವರು ಕಾನೂನು ಬಾಹಿರವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿದರು.

ಈ ಕುರಿತು ಇಂದಿನ ಜಿಲ್ಲಾಧಿಕಾರಿ ಹಾಗೂ ಇಂದಿನ ಎಪಿಎಂಸಿ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ್ದು ತನಿಖೆ ನಡೆಸಲು ಒತ್ತಾಯಿಸಿದ್ದು, ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರವೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

ABOUT THE AUTHOR

...view details