ರಾಯಚೂರು: ಕೇಂದ್ರ ಸರ್ಕಾರ ರಾಜ್ಯದಲ್ಲಿ ಏಮ್ಸ್ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಸ್ಥಾಪನೆ ಮಾಡಲಾಗುವುದೆಂದು ಆದೇಶ ಪ್ರಕಟಿಸಿದ್ದು, ಅದನ್ನು ರಾಯಚೂರಿನಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ರಾಯಚೂರು ಏಮ್ಸ್ ಹೋರಾಟ ಸಮಿತಿಯ ಪದಾಧಿಕಾರಿಗಳು ಒತ್ತಾಯಿಸಿದರು.
ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪಿಸುವಂತೆ ಒತ್ತಾಯ - ಏಮ್ಸ್ ಸ್ಥಾಪನೆ
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮನವರಿಕೆ ಮಾಡಬೇಕೆಂದು ಏಮ್ಸ್ ಹೋರಾಟ ಸಮಿತಿಯ ಪದಾಧಿಕಾರಿಗಳು ಒತ್ತಾಯಿಸಿದರು.

ನಗರದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಈ ಹಿಂದೆ ಜಿಲ್ಲೆಗೆ ಮಂಜೂರಾಗಿದ್ದ ಐ.ಐ.ಟಿ, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಕೈತಪ್ಪಿ ಹೋಗಿದ್ದು, ರಾಜ್ಯದಲ್ಲಿಯೇ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊತ್ತಿರುವ ರಾಯಚೂರನ್ನು ಅಭಿವೃದ್ಧಿಯತ್ತಾ ಕೊಂಡೊಯ್ಯಲು ಇದು ಸಹಕಾರಿ. ಆದ್ದರಿಂದ ಕೇಂದ್ರ ಸರ್ಕಾರ ಪ್ರಕಟಿಸಿದ ಏಮ್ಸ್ ಅನ್ನು ರಾಯಚೂರಿನಲ್ಲಿಯೇ ಸ್ಥಾಪನೆ ಮಾಡುವಂತೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮನವರಿಕೆ ಮಾಡಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಏಮ್ಸ್ ಹೋರಾಟ ಸಮಿತಿ ಮುಖಂಡರಾದ ರಾಘವೇಂದ್ರ ಕುಷ್ಟಗಿ, ಚಾಮರಸ ಪಾಟೀಲ್, ರವೀಂದ್ರ ಜಲ್ದಾರ್, ಅಂಬಣ್ಣ ಆರೋಲಿಕರ್, ಅಶೋಕ ಕುಮಾರ್ ಜೈನ್, ಹರವಿ ನಾಗನಗೌಡ, ಡಾ.ಮಹಾಲಿಂಗಪ್ಪ, ಅರ್.ಕೆ.ಅಮರೇಶ, ಬಸವರಾಜ ಕಳಸ, ರಜಾಕ್ ಉಸ್ತಾದ್, ಶಿವಕುಮಾರ ಯಾದವ್, ಸೇರಿದಂತೆ ಇತರರು ಉಪಸ್ಥಿತರಿದ್ದರು.