ಕರ್ನಾಟಕ

karnataka

ETV Bharat / state

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ - ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಸಿಎಂಗೆ ಮನವಿ

ರಾಯಚೂರು ಜಿಲ್ಲೆಯ ವಿವಿಧ ತಾಲೂಕುಗಳ ರೈತರ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Appeal to Chief Minister demanding to fulfill the various demands of the farmers
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ

By

Published : Jun 12, 2020, 4:46 PM IST

ರಾಯಚೂರು:ಜಿಲ್ಲೆಯ ಲಿಂಗಸೂಗುರು ಸೇರಿದಂತೆ ಇತರೆ ತಾಲೂಕುಗಳ ರೈತರ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ

ಮನವಿಯಲ್ಲಿ ಪ್ರಧಾನಿ ಪ್ಯಾಕೇಜ್​ನಲ್ಲಿ ಪ್ರತಿ ರೈತರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು. ತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಬೆಳೆಹಾನಿ ಸ್ಥಳ ಸಮೀಕ್ಷೆ ನಿಖರವಾಗಿ ಮಾಡಿಲ್ಲ. ರೈತರು ನಾಟಿ ಮಾಡಿದ ಬೆಳೆಗಳ ಕುರಿತು ಪಹಣಿಯಲ್ಲಿ ನಮೂದಿಸಿಲ್ಲ. ಇಂತಹ ಲೋಪದೋಷಗಳನ್ನ ಸರಿಪಡಿಸಿ, ನಷ್ಟಕ್ಕೆ ಒಳಗಾದ ಎಲ್ಲರಿಗೂ ಪರಿಹಾರ ನೀಡಬೇಕು.

ಪ್ರವಾಹ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ನಡುಗಡ್ಡೆ ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ. ಅಲ್ಲದೆ ಎನ್ಆರ್​ಬಿಸಿ ರಾಂಪುರ ಏತ ನೀರಾವರಿ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ಭೂ ಪರಿಹಾರ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ABOUT THE AUTHOR

...view details