ರಾಯಚೂರು: ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು, ಮೇಲುಸ್ತುವಾರಿಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಹೇಳಿದರು.
ಮಳೆ ಹಾನಿ ಪ್ರದೇಶಗಳ ಮೇಲುಸ್ತುವಾರಿಗಾಗಿ ನೋಡಲ್ ಅಧಿಕಾರಿ ನೇಮಕ : ಡಿಸಿ - ರಾಯಚೂರು ಜಿಲ್ಲಾಧಿಕಾರಿ
ಕಳೆದ ರಾತ್ರಿ ಸುರಿದ ಮಳೆಯಿಂದ ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ತೊಂದರೆ ಅನುಭವಿಸಿದ್ದು, ಪರಿಹಾರ ಕ್ರಮ ಕೈಗೊಳ್ಳಲು ಬಡಾವಣೆಗೆ ಇಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಡಿಸಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ರಾತ್ರಿ ಸುರಿದ ಮಳೆಯಿಂದ ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ತೊಂದರೆ ಅನುಭವಿಸಿದ್ದಾರೆ. ಪರಿಹಾರ ಕ್ರಮ ಕೈಗೊಳ್ಳಲು ಬಡಾವಣೆಗೆ ಇಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದರು.
ನೋಡಲ್ ಅಧಿಕಾರಿಗಳು ತಗ್ಗು ಪ್ರದೇಶದ ಬಡಾವಣೆಯಲ್ಲಿ ಮಳೆ ಬಂದರೆ ಹಾನಿಯಾಗದ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಕಡೆ ಗಂಜಿ ಕೇಂದ್ರ ಪ್ರಾರಂಭಿಸಿ ಮೂಲ ಸೌಕರ್ಯ ನೀಡಬೇಕು, ಮಳೆಯಿಂದ ಮನೆಗಳ ಹಾನಿ ಕುರಿತು ವರದಿ ನೀಡಿ, ಮನೆಗಳು ಬಿದ್ದರೆ ಪರಿಹಾರ ಕ್ರಮ ಕೈಗೊಳ್ಳಬೇಕು. ಮುಂದಿನ ಮೂರು ದಿನಗಳ ಕಾಲ ಮಳೆ, ಮೊಡ ಕವಿದ ವಾತವರಣ ಮುಂದುವರೆಯಲಿದೆ ಹೀಗಾಗಿ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.