ಕರ್ನಾಟಕ

karnataka

ETV Bharat / state

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಯ 349ನೇ ಆರಾಧನಾ ಮಹೋತ್ಸವ

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಯ 349ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಭಕ್ತರಿಗೆ ಮಹೋತ್ಸವಕ್ಕೆ ಅವಕಾಶ ನಿರಾಕರಿಸಲಾಗಿದ್ದು, ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು 'ಮಂತ್ರಾಲಯ ವಾಹಿನಿ' ಯೂಟ್ಯೂಬ್ ಚಾನೆಲ್​ನಲ್ಲಿ ನೇರಪ್ರಸಾದ ಮೂಲಕ ವೀಕ್ಷಿಸಬಹುದಾಗಿದೆ.

Aradhana Mahotsava of Ragavendra Swamy
ಗುರುರಾಘವೇಂದ್ರ ಸ್ವಾಮಿಯ ಆರಾಧನಾ ಮಹೋತ್ಸವ

By

Published : Aug 4, 2020, 5:34 PM IST

ರಾಯಚೂರು : ಮಂತ್ರಾಲಯದ ಶ್ರೀ ಗುರುರಾಘವೇಂದ್ರ ಸ್ವಾಮಿಯ 349 ನೇ ಆರಾಧನಾ ಮಹೋತ್ಸವ ನಿಮಿತ್ತ ಇಂದು ಪೂರ್ವಾರಾಧನೆ ನಡೆಯಿತು.

ಬೆಳಗ್ಗೆ ಪಾದುಕೆ ಪೂಜೆ, ಬಳಿಕ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ನೆರವೇರಿತು. ಇದಾದ ಬಳಿಕ, ಮೂಲ ರಾಮ ದೇವರ ಪೂಜೆ ನೆರವೇರಿಸಲಾಯಿತು. ಸಂಜೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮಂತ್ರಾಲಯದಲ್ಲಿ ರಾಯರ ಆರಾಧನಾ ಮಹೋತ್ಸವ

ಪ್ರತಿ ವರ್ಷ ಆರಾಧನಾ ಮಹೋತ್ಸವದಲ್ಲಿ ಭಾಗವಹಿಸಲು ದೇಶದ ನಾನಾ ಮೂಲೆಗಳಿಂದ ಭಕ್ತರು ಮಠಕ್ಕೆ ಆಗಮಿಸುತ್ತಿದ್ದರು. ಆದರೆ, ಈ ಬಾರಿ ಕೊರೊನಾ ಕಾರಣ ಭಕ್ತರಿಗೆ ಮಹೋತ್ಸವಕ್ಕೆ ಅವಕಾಶ ನಿರಾಕರಿಸಲಾಗಿದೆ. ಬದಲಾಗಿ ಮಠದ ಸಿಬ್ಬಂದಿ, ಆರ್ಚಕರು, ಅಧಿಕಾರಿಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಮಠದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು 'ಮಂತ್ರಾಲಯ ವಾಹಿನಿ' ಯುಟ್ಯೂಬ್ ಚಾನೆಲ್​ನಲ್ಲಿ ವೀಕ್ಷಿಸಬಹುದಾಗಿದೆ.

ABOUT THE AUTHOR

...view details